ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ. ಸುರೇಶ್ ನೋಟಿಸ್ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇಡಿ ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
ಈಗಾಗಲೇ ವಿವಿಧ ಸಂದರ್ಭದಲ್ಲಿ ನಮ್ಮ ಮೇಲೆ ದಾಳಿ ಮಾಡಲಾಗಿದೆ.
ಇದು ರಾಜಕೀಯ ದಾಳಿ ಎಂಬುದು ಈಗಾಗಲೇ ಸಾಬೀತಾಗಿದೆ. ನಾನು ಈಗಾಗಲೇ ಹಲವು ಬಾರಿ ಈ ವಿಷಯವಾಗಿ ಮಾಧ್ಯಮಗಳ ಬಳಿ ಪ್ರಸ್ತಾಪಿಸಿದ್ದೇನೆ ಎಂದರು.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರದಲ್ಲಿ ನಡೆದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.