Publish Date: Mon, 16 Dec 2019 (19:46 IST)
Updated Date: Mon, 16 Dec 2019 (19:49 IST)
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಗ್ರಾಮದ ಬಾಲಕಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಭೇಟಿ ನೀಡಿದ್ರು.
ಸಚಿವೆ ಶಶಿಕಲಾ ಜೊಲ್ಲೆ ಅವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬೆಳಗಾವಿಯ ಕಡೋಲಿ ಗ್ರಾಮದ ಬಾಲಕಿಯ ಮನೆಗೆ ಭೇಟಿ ನೀಡಿದ್ರು.
ಬಾಲಕಿಯ ಪಾಲಕರೊಂದಿಗೆ ಮಾತನಾಡಿದ ಸಚಿವರು, ಮಗುವಿಗೆ ಸಾಂತ್ವನ ಹೇಳುವುದರ ಜತೆಗೆ ಕುಟುಂಬಕ್ಕೆ ಧೈರ್ಯ ತುಂಬಿದರು.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ತಕ್ಕ ಶಿಕ್ಷೆ ಆಗಲಿದೆ ಎಂದರು. ಆರೋಪಿ ವಿರುದ್ಧ ಮೂರು ಪ್ರಕರಣಗಳು ದಾಖಲಿಸಲಾಗಿದ್ದು, ಯಾವುದೇ ಒತ್ತಡಕ್ಕೂ ಮಣಿಯದೇ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು.
ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಬೇರೆ ಬೇರೆ ಇಲಾಖೆಗಳಿಂದ ದೊರೆಯುವ ನೆರವು ಒದಗಿಸಲಾಗುತ್ತದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ರು.
ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.