Publish Date: Mon, 05 Oct 2020 (10:01 IST)
Updated Date: Mon, 05 Oct 2020 (10:02 IST)
ಮೈಸೂರು : ಇಂದು ಮೈಸೂರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಲಿದ್ದಾರೆ.
ಮೈಸೂರಿನಲ್ಲಿ ಕೊರೊನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಮೈಸೂರಿಗೆ ಭೇಟಿ ನೀಡಲಿರುವ ಸಚಿವ ಸುಧಾಕರ್ ಅವರು ಕೊರೊನಾ ತಡೆ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಹಾಗೇ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿಯೂ ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ನಾಳೆ ತಮ್ಮ ಪ್ರಯಾಣ ಮುಂದುವರಿಸಿದ್ದು, ಮಡಿಕೇರಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.