Publish Date: Tue, 18 Aug 2026 (20:05 IST)
Updated Date: Tue, 18 Aug 2026 (20:10 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಂಗಳವಾರ ಕೆಲ ಬದಲಾವಣೆಗಳನ್ನು ಮಾಡಿದ್ದು, ಇದೀಗ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಇದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಕೃಷ್ಣಬೈರೇಗೌಡ ಅವರಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಿಫಾರಸಿನಂತೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಸಚಿವರ ಖಾತೆಗಳ ಮರುಹಂಚಿಕೆ ಮಾಡಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ.
ಕೃಷ್ಣ ಬೈರೇಗೌಡ ಅವರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ವಹಿಸಿಕೊಂಡಿದ್ದಾರೆ.
ಬಿಡಿಎ, ಬಿಎಂಆರ್ಡಿಎ ಹೊರತುಪಡಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಐದು ನಗರ ಪಾಲಿಕೆಗಳು, ಬೆಂಗಳೂರು ಜಲಮಂಡಳಿ, ಮೆಟ್ರೊ ಮಾತ್ರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆಗೆ ಹಂಚಲಾಗಿದೆ.
ಸದ್ಯ ಡಿಕೆಶಿ ಬಳಿ ಹಣಕಾಸು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಕಾನೂನು ಮತ್ತು ಹಂಚಿಕೆಯಾಗದ ಖಾತೆಗಳಿವೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ