ತುಮಕೂರು ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ ಡೌನ್ ಮಾಡುತ್ತಿರುವುದರಿಂದ ಸೋಂಕು ಹರಡುವಿಕೆ ಕಡಿಮೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ಬಂದವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಬೆಂಗಳೂರಿನಿಂದ ಬಂದವರ ಬಗ್ಗೆ ಮಾಹಿತಿ ನೀಡಲಿಲ್ಲ. ಇದರಿಂದಾಗಿ ಊರಿಗೆ ಊರೇ ಸೀಲ್ ಡೌನ್ ಮಾಡುವಂತಾಯಿತು. ಈಗ ಬೆಂಗಳೂರಿನಿಂದ ಬಂದವರ ಬಗ್ಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗಿದೆ ಎಂದರು.
ಬೆಂಗಳೂರಿನಿಂದ ಬಂದವರಿಗೆ ಟೆಸ್ಟ್ ಮಾಡಿ 48 ಗಂಟೆ ಒಳಗೆ ರಿಸಲ್ಟ್ ಕೊಡುತ್ತಿದ್ದೇವೆ. ಅಲ್ಲಿವರೆಗೂ ಬೆಂಗಳೂರಿನಿಂದ ಬಂದವರು ಯಾರ ಸಂಪರ್ಕಕ್ಕೆ ಬರಬಾರದು, ಟೆಸ್ಟ್ ನೆಗೆಟಿವ್ ಬಂದ್ರೆ ಮನೆಗೆ ಹೋಗಲಿ , ಪಾಸಿಟಿವ್ ಬಂದ್ರೆ ಆಸ್ಪತ್ರೆಗೆ ದಾಖಲಾಗಬೇಕು ಎಂದರು.