ತುಮಕೂರು : ಚಿರತೆ ದಾಳಿಗೆ ಬಾಲಕಿ ಬಲಿಯಾದ ಹಿನ್ನಲೆಯಲ್ಲಿ ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
3 ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಚಿರತೆ ಮಗುವನ್ನು ಕೊಂದು ತಿಂದ ಘಟನೆ ತುಮಕೂರು ಜಿಲ್ಲೆಯ ಕಣಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಈ ಹಿನ್ನಲೆಯಲ್ಲಿ ಇಂದು ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಾಧುಸ್ವಾಮಿಗೆ ಡಿಸಿ ರಾಕೇಶ್ ಕುಮಾರ್ ಸಾಥ್ ನೀಡಿದ್ದಾರೆ.