ಬೆಂಗಳೂರು: ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವುದರಿಂದ ಯಾವುದೇ ಸುಧಾರಣೆಯಾಗುತ್ತಿಲ್ಲ. ಹಾಗಾಗಿ ತಾನು ಬೌಧ ಧರ್ಮವನ್ನು ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಘೋಷಣೆ ಮಾಡಿದ್ದಾರೆ.
ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಯಶ ಕೋರಿ ಪೋಸ್ಟ್ ಮಾಡಿದ್ದಾರೆ. ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ ಎಂದು ಸಚಿವ ಹೆಚ್ಸಿ ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ.