ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು, ತಮ್ಮ ಗುರುತೇ ತಮಗಿರುವುದಿಲ್ಲ. ಮಾತೇತ್ತಿದ್ರೆ ದೊಡ್ಡ ವಿಚಾರವಾದಿಗಳು ಎಂದು ಹೇಳಿಕೊಳ್ಳುವುದು. ಜಾತ್ಯಾತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ ಸಂಶಯ ಬರುತ್ತೆ ಎಂದು ಹೇಳಿದ್ದಾರೆ.
ನಾನೊಬ್ಬ ಹಿಂದೂ, ಮುಸ್ಲಿಂ, ಕ್ರೈಸ್ತ ಅಥವಾ ಲಿಂಗಾಯತ ಅಂತಾ ಯಾರದ್ರೂ ತಮ್ಮ ಧರ್ಮವನ್ನು ಹೆಮ್ಮೆಯಿಂದ ಹೇಳಿಕೊಂಡರೆ ನನಗೆ ಖುಷಿ ಅನಿಸುತ್ತೆ ಎಂದಿರುವ ಅವರು ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಸಂವಿಧಾನ ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.