ರಾಜ್ಯ ಸರಕಾರದ ವಿರುದ್ಧ ವಿನಾಕಾರಣ ಬಿಜೆಪಿಯವರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು, ಬಿಜೆಪಿ ಅಧಿಕಾರಕ್ಕಾಗಿ ಹಗಲು ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎನ್ನುವುದು ಬಿಜೆಪಿಯವರ ಹಗಲುಗನಸು. ಐದು ವರ್ಷ ನಾವೇ ಆಡಳಿತ ನಡೆಸಲಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಐದು ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರಿಯಲಿದೆ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು.
ಹಾಸನದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಮತ್ತು ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಸಮ್ಮಿಶ್ರ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಮುನ್ನೆಡೆಯಲಿದೆ ಎಂದು ಹೇಳಿದರು.