ಬೆಂಗಳೂರು : ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಹಿರಿಯ ಕೈ ಮುಖಂಡರ ವಿರುದ್ಧ ರಾಮಲಿಂಗಾರೆಡ್ಡಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷಕ್ಕಾಗಿ ದುಡಿದು ಉತ್ತಮ ಕೆಲಸ ಮಾಡಿದ್ದರೂ ಸಚಿವ ಸ್ಥಾನ ನೀಡದೇ ವಂಚಿಸಿದ್ದಾರೆ. ಹಿರಿತನಕ್ಕೆ ಪಕ್ಷದಲ್ಲಿ ಬೆಲೆ ಇಲ್ಲ. ಹೀಗಾಗಿ ರಾಮಲಿಂಗಾರೆಡ್ಡಿ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಲು ಬಿಬಿಎಂಪಿಯ ಕೆಲ ಪಾಲಿಕೆ ಸದಸ್ಯರು ಮುಂದಾಗಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.
ಜಯನಗರದ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ರೆಡ್ಡಿ ಬೆಂಬಲಿಗರು ಸೇರಿದಂತೆ ಹಲವರು ಸೇರಿ ಈ ಕುರಿತು ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಪಾಲ್ಗೊಂಡ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ‘ಕೆಲಸ ಮಾಡದ ಸಚಿವರನ್ನು ತೆಗೆದುಹಾಕಿ. ಪಕ್ಷಕ್ಕಾಗಿ ಹಗಲಿರುಳು ದುಡಿದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಿ. ಸಚಿವ ಸ್ಥಾನ ಸಿಗದೇ ಇದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.