ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ನಡೆಸುತ್ತಿದ್ದರೂ ಆರೋಗ್ಯ ಸಚಿವ ರಮೇಶ್ ಕುಮಾರ್
ಅವರಿಗೆ ವೈದ್ಯರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲವಂತೆ. ಖುದ್ದು ಸಚಿವರೇ ಇಂತಹ ಹೇಳಿಕೆ ನೀಡಿರುವುದು ಆಘಾತ ತಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಖಾಸಗಿ ವೈದ್ಯರು ಯಾವ ಕಾರಣಕ್ಕಾಗಿ ಮುಷ್ಕರ
ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ನಿಮಗೇನಾದರೂ ಗೊತ್ತಿದ್ದರೆ ತಿಳಿಸಿ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಮುಷ್ಕರ ನಡೆಸುವುದು ಪ್ರಜೆಗಳ ಹಕ್ಕು. ವೈದ್ಯರಿಗೆ ಮುಷ್ಕರ ನಡೆಸುವ ಹಕ್ಕಿದೆ ನಡೆಸುತ್ತಿದ್ದಾರೆ ಎಂದು
ಉಡಾಫೆ ಉತ್ತರ ನೀಡಿರುವುದು ಆಶ್ಚರ್ಯ ತಂದಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಅನೇಕ ರೋಗಿಗಳು ತೊಂದರೆಗೊಳಗಾಗಿದ್ದರೂ
ಸಚಿವರಿಗೆ ಮಾತ್ರ ವೈದ್ಯರ ಮುಷ್ಕರ ಗೊತ್ತಿಲ್ಲದಿರುವುದು ದುರ್ದೈವವೇ ಸರಿ ಎಂದು ರೋಗಿಗಳಉ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.