ಹಾಸನ : ಹಾಸನದ ಜಿಲ್ಲಾಧಿಕಾರಿ ಈ ಕೂಡಲೇ ವರ್ಗಾವಣೆ ಮಾಡಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಪಡವಲಹಿಪ್ಪೆಯ ಮತಗಟ್ಟೆ ಯಲ್ಲಿ ಅಕ್ರಮ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಆದರೆ ಚುನಾವಣೆ ಮುಕ್ತವಾಗಿ ನಡೆದಿದೆ ಎಂದು ಹೇಳಿರುವ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಈ ದೂರನ್ನು ಸ್ವೀಕರಿಸಿದ್ದಕ್ಕೆ ಇದೀಗ ಸಚಿವ ರೇವಣ್ಣ ಕೆಂಡಮಂಡಲರಾಗಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಮುಕ್ತವಾಗಿ ನಡೆದಿದೆ ಎಂದು ಹೇಳಿರುವ ಜಿಲ್ಲಾಧಿಕಾರಿಗಳೇ, 10 ದಿನಗಳ ಬಳಿಕ ಚುನಾವಣಾ ಅಕ್ರಮ ನಡೆದಿದೆ ಎನ್ನುವುದರ ಬಗ್ಗೆ ಏಕೆ ದೂರು ಪಡೆದುಕೊಂಡರು. ಈ ಬಗ್ಗೆ ತನಿಖೆ ಆಗಬೇಕು, ಅಲ್ಲದೇ ಜಿಲ್ಲಾಧಿಕಾರಿಗಳು ಮುಕ್ತವಾಗಿ ಮತ ಎಣಿಕೆ ಮಾಡಿಸುವ ಕುರಿತು ನಮಗೆ ನಂಬಿಕೆ ಇಲ್ಲ. ಆದ್ದರಿಂದ ಕೂಡಲೇ ಅವರನ್ನು ವರ್ಗಾವಣೆ ಮಾಡಿ ಬೇಕು. ಅವರು ವರ್ಗಾವಣೆ ಆಗಿ ಬಂದ ಬಳಿಕ ನಡೆದ ಎಲ್ಲಾ ಬೆಳವಣಿಗೆಗಳ ಬಗ್ಗೆ ಮುಕ್ತ ತನಿಖೆ ನಡೆಸಬೇಕಿದೆ. ಎಂದು ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.