Publish Date:
Monday, 17 April 2023 (11:16 IST)
Updated Date: Friday, 30 January 2026 (01:44 IST)
ಚಿಕ್ಕಬಳ್ಳಾಪುರ : ಕಳೆದ ಗುರುವಾರ ಕುಟುಂಬ ಸಮೇತ ಸರಳವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸಚಿವ ಸುಧಾಕರ್ ನಗರದಲ್ಲಿ ಸಹಸ್ರಾರು ಮಂದಿ ಬೆಂಬಲಿಗರೊಂದಿಗೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಧಿಕೃತವಾಗಿ ಬಿ ಫಾರಂ ಸಮೇತ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕಳೆದ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನೇರವಾಗಿ ಆಗಮಿಸಿ ನಾಮಿನೇಷನ್ ಮಾಡಿದ್ರು. ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಚಿವ ಸುಧಾಕರ್ ಟೆಂಪಲ್ ರನ್ ನಡೆಸಿದ್ದಾರೆ.
ಚಿಕ್ಕಬಳ್ಳಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಇಂದು ಮೊದಲು ಮನೆಯಲ್ಲೇ ದೇವರ ಪೂಜೆ ಮಾಡಿ ನಂತರ ತಾಯಿ ಪೋಟೋಗೆ ನಮನ ಸಲ್ಲಿಸಿದರು. ಇದಾದ ನಂತರ ಚಿಕ್ಕಪ್ಯಾಯಲಗುರ್ಕಿಯ ತಮ್ಮ ಮನೆ ದೇವ್ರು ಚನ್ನಕೇಶವಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಪುನಸ್ಕಾರ ಮಾಡಿದರು.