ಭೂಗತ ಪಾತಕಿಯೊಬ್ಬರಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಬೆದರಿಕೆ ಒಡ್ಡಲಾಗಿದ್ದು, 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ.
ಹಣ ನೀಡದಿದ್ದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಲಾಗಿದೆ ಎಂದು ತನ್ವೀರ್ ಸೇಠ್ ಅವರು ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಅವರಿಗೆ ದೂರು ನೀಡಿದ್ದಾರೆ.
ಸಚಿವರ ಆಪ್ತ ಸಹಾಯಕರು ಸಲ್ಲಿಸಿರುವ ದೂರಿನಲ್ಲಿ, ವಿದೇಶದ ದೂರವಾಣಿ ಸಂಖ್ಯೆಯಿಂದ ಸಚಿವರಿಗೆ ಬೆದರಿಕೆ ಕರೆಗಳು ಮತ್ತು ಸಂದೇಶಗಳು ಬರುತ್ತಿದ್ದು, ಇಂಟರ್ನೆಟ್ ಕಾಲ್ ಗಳು ಸಹ ಬರುತ್ತಿವೆ. ರವಿ ಪೂಜಾರಿ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.