ಮೈಸೂರು : ರೇಷ್ಮೆ ಸಚಿವ ವಿ.ಸೋಮಣ್ಣ ಅವರು ಮೈಸೂರಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್ ಜನರಲ್ ಮ್ಯಾನೇಜರ್ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಸಚಿವ ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹ ಮೈಸೂರಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್ ಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ನೌಕರರ ಸಮಸ್ಯೆಗಳನ್ನು ಕೇಳಿ ಕೋಪಗೊಂಡ ಸಚಿವ ಸೋಮಣ್ಣ ಅವರು ಜನರಲ್ ಮ್ಯಾನೇಜರ್ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿನ ನೌಕರರ ಸಮಸ್ಯೆ ಬಗೆಹರಿಸಬೇಕು, ಉತ್ಪಾದನೆ ಜಾಸ್ತಿ ಆಗಬೇಕು. ಯಾವ ಕಳ್ಳಾಟ ನಡೆಯೋಕೆ ಬಿಡಲ್ಲ. ಸರಿಯಾಗಿ ಕೆಲಸ ಮಾಡದಿದ್ದರೆ ಬಂಧೀಖಾನೆ ಹೇಗಿದೆ ಅಂತ ನೋಡಿಕೊಂಡು ಬರೋಕೆ ಕಳುಹಿಸುತ್ತೇನೆ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.