ಬೆಂಗಳೂರು : ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪ್ರಶ್ನೆ ಮಾಡಿದ್ದರು. ಈ ಅಭಿಪ್ರಾಯಕ್ಕೆ ಬೊಮ್ಮಾಯಿ ಸರಣಿ ಟ್ವೀಟ್ ಮಾಡಿ ವೆಂಕಟೇಶ್ ಅವರನ್ನು ಕುಟುಕಿದ್ದಾರೆ.
ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.
ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ, ಹೈ ಕಮಾಂಡ್ ಮೆಚ್ಚಿಸಲೊ?. ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.