Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಉತ್ತರಕನ್ನಡ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ವಿವಾಹಿತ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಅಂಕೋಲದಲ್ಲಿ ನಡೆದಿದೆ.
ಸಂತ್ರಸ್ತೆಯ ತಾಯಿ ಇದೀಗ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಕೆಲವು ಸಮಯದಿಂದ ಆರೋಪಿ ಅಪ್ರಾಪ್ತೆಯನ್ನು ನಂಬಿಸಿ ವಂಚಿಸುತ್ತಿದ್ದ. ವಿಚಾರ ತಿಳಿದ ಸಂತ್ರಸ್ತೆಯ ತಾಯಿ ಇದೀಗ ಪೊಲೀಸರಿಗೆ ದೂರು ನೀಡಿದ್ದಾಳೆ.