Webdunia - Bharat's app for daily news and videos

Install App

ಮೀನುಗಾರರು ನಾಪತ್ತೆಯಾದ ಹಿನ್ನಲೆ; ನಾಳೆ ಉಡುಪಿಗೆ ಆಗಮಿಸಲಿರುವ ಗೃಹ ಸಚಿವರು

Webdunia
ಶುಕ್ರವಾರ, 4 ಜನವರಿ 2019 (11:30 IST)
ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ನಾಪತ್ತೆಯಾಗಿದ ಹಿನ್ನಲೆಯಲ್ಲಿ ಅವರನ್ನು ಪತ್ತೆ ಹಚ್ಚುವ ಕಾರ್ಯ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸುವ ಸಲುವಾಗಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್ ಶನಿವಾರ(ನಾಳೆ) ಉಡುಪಿಗೆ ಆಗಮಿಸಲಿದ್ದಾರೆ.


ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟ್ ಹಾಗೂ ಅದರಲ್ಲಿ ಕೆಲಸ ಮಾಡುತ್ತಿದ್ದ ಮೀನೂಗಾರರು ಕಾಣೆಯಾಗಿದ್ದು, ಇಂದಿಗೂ ಪತ್ತೆಯಾಗಿಲ್ಲ.


ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್  ಅವರು ನಾಳೆ ಬೆಳಗ್ಗೆ ಹುಬ್ಬಳಿಯಿಂದ ಹೊರಟು ಮಧ್ಯಾಹ್ನ 2.30 ಕ್ಕೆ ಉಡುಪಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷರ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕರಾವಳಿ ಕಾವಲು ಪಡೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಸಂಜೆ ಮೀನುಗಾರರ ಸಂಘದ ಪದಾಧಿಕಾರಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ ನಾಪತ್ತೆಯಾದ ಮೀನುಗಾರರ ಪತ್ತೆ ಕಾರ್ಯ ನಡೆಸುವ ಕುರಿತು ಸಭೆ ನಡೆಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments