ರಾಜಧಾನಿ ಬೆಂಗಳೂರಿನಲ್ಲೇ ಅದು ಕಾಣೆಯಾಗುತ್ತಿದ್ದು, ಮಕ್ಕಳ ಪಾಲಕರು, ಪೋಷಕರು ಭವಿಷ್ಯದ ದೃಷ್ಟಿಯಿಂದ ಜಾಗೃತರಾಗಬೇಕೆಂದು ಡಿಸಿಎಂ ಹೇಳಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರೋ ಸಾಹಿತ್ಯ ಸಮ್ಮೇಳನದಲ್ಲಿ ಡಿಸಿಎಂ ಗೋವಿಂದ ಕಾರಜೋಳ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಗತ ಭಾಷಣ ಮಾಡಿದರು.
ರಾಜಧಾನಿಯಲ್ಲಿ ಕನ್ನಡ ಮರೆಯಾಗುತ್ತಿದೆ. ಬೆಂಗಳೂರಿನಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳು ಮುಚ್ಚುತ್ತಿವೆ.
ಅನ್ಯಭಾಷಿಕರೊಂದಿಗೆ ನಾವು ಬೇರೆ ಭಾಷೆಯಲ್ಲಿ ಮಾತನಾಡದೇ ಅವರಿಗೆ ಕನ್ನಡದಲ್ಲಿಯೇ ಉತ್ತರಿಸಬೇಕೆಂದರು.
ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 10 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿದ್ದಾರೆ.
ಕನ್ನಡ ಭಾಷೆ, ಕನ್ನಡಿಗರ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದೆ. ಹೀಗಂತ ಉಪ ಮುಖ್ಯಮಂತ್ರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಹೇಳಿದರು.