ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿದ ಶಾಸಕ ಗೋವಿಂದ್ ಕಾರಜೋಳ್, ರೈತರನ್ನು ವಶಕ್ಕೆ ಪಡೆಯಲು ರೈತರೇನು ಗೂಂಡಾಗಳಾ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ದೇಶಕ್ಕೆ ಅನ್ನ ನೀಡುವ ರೈತರನ್ನು ಗೂಂಡಾಗಳಂತೆ ಬಂಧಿಸಿರುವುದು ಸರಿಯಲ್ಲ. ಚಳಿಗಾಲದ ಅಧಿವೇಶನ ನಡೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮದ ಹೆಸರಿನಲ್ಲಿ ರೈತರನ್ನು ವಶಕ್ಕೆ ಪಡೆಯಲು ಅವರೇನು ಗೂಂಡಾಗಳಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು.
ಶಾಸಕ ಗೋವಿಂದ್ ಕಾರಜೋಳ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಮುಂಜಾನೆ 9.30ಕ್ಕೆ ಬಂಧಿತ ರೈತರನ್ನು ಬಿಡುಗಡೆಗೊಳಿಸುವಂತೆ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿವೇಶನ ನಡೆದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಕೆಲವು ರೈತರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಸಮರ್ಥನೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ