Webdunia - Bharat's app for daily news and videos

Install App

ಎಚ್‌ಡಿಕೆ ವಿರುದ್ಧ ಸಿಡಿ ನೀಡಲು 3 ವಾರ ಕಾಲಾವಕಾಶ ಕೇಳಿದ ರೆಡ್ಡಿ

Webdunia
ಶುಕ್ರವಾರ, 19 ಮೇ 2017 (15:49 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 150 ಕೋಟಿ ಗಣಕಪ್ಪ ಪಡೆದಿದ್ದಾರೆ ಎನ್ನುವ ಸಿಡಿ ನೀಡಲು ಮೂರು ವಾರಗಳ ಕಾಲಾವಕಾಶ ಕೇಳಿರುವುದಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಜನಾರ್ದನ ರೆಡ್ಡಿ ಹೇಳಿದ್ದಾರೆ.
 
ಕಳೆದ 2006ರಲ್ಲಿ ಕುಮಾರಸ್ವಾಮಿ 150 ಕೋಟಿ ಗಣಿಕಪ್ಪ ಪಡೆದಿದ್ದಾರೆ ಎಂದು ನಾನೇ ಆರೋಪಿಸಿದ್ದೆ. ಆದ್ದರಿಂದ, ಸಾಕ್ಷ್ಯಗಳನ್ನು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರಿದ್ದಾರೆ ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ರಚಿಸಲಾದ ವಿಶೇಷ ತನಿಖಾ ತಂಡದ ಮುಂದೆ ಇಂದು ಹಾಜರಾದ ಜನಾರ್ದನ ರೆಡ್ಡಿ,,ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.
 
150 ಕೋಟಿ ಲಂಚದ ಗಣಿಕಪ್ಪ ಪ್ರಕರಣ ಕುರಿತಂತೆ ಕುಮಾರಸ್ವಾಮಿ ವಿರುದ್ಧದ ಸಾಕ್ಷ್ಯಾಧಾರಗಳನ್ನು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರಿದ್ದಾರೆ. ಸಿಡಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ನೀಡಲು ಮೂರು ವಾರಗಳ ಕಾಲಾವಕಾಶ ಕೋರಿದ್ದೇನೆ. ಅದಕ್ಕೆ ಎಸ್‌ಐಟಿ ಅಧಿಕಾರಿಗಳು ಒಪ್ಪಿದ್ದಾರೆ ಎಂದು ಹೇಳಿದ್ದಾರೆ. 
 
ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಸ್‌ಐಟಿ ಅಧಿಕಾರಿಗಳು, ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments