Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ರೇವಣ್ಣಗೆ ಮಧ್ಯಂತರ ಜಾಮೀನು

Sampriya
ಗುರುವಾರ, 16 ಮೇ 2024 (19:55 IST)
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ ನ್ಯಾಯಾಲಯ ಶಾಸಕ ಎಚ್​ಡಿ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಮಧ್ಯಂತರ ಜಾಮೀನು ನೀಡಿ ​ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ ಕೋರ್ಟ್​, ಅಂತಿಮವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲೂ ಮೊದಲನೇ ಆರೋಪಿ ಆಗಿರುವ ರೇವಣ್ಣ, ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ಗೆ ಹಾಜಾರಾಗಿದ್ದರು. ನ್ಯಾಯಾಧೀಶರ ಮುಂದೆಯೇ ಹಾಜರಾಗಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ