ಲಾಕ್ ಡೌನ್ ಇರೋವಾಗ ಪೋಲಿಸ್ ಸಿಬ್ಬಂದಿ ಅನಾವಶ್ಯಕವಾಗಿ ಮನೆಯಿಂದ ಹೊರ ಬರುವವರ ಮೇಲೆ ಲಾಠಿ ಬೀಸಬಾರದು ಅಂತ ಶಾಸಕರೊಬ್ಬರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಲಾಕ್ ಡೌನ್ ಹಾವೇರಿ ಜಿಲ್ಲಾದ್ಯಂತ ಜಾರಿಯಲ್ಲಿದ್ದರೂ ಅನಾವಶ್ಯಕವಾಗಿ ಓಡಾಟ ಮಾಡುವವರ ಮೇಲೆ ಪೊಲೀಸ್ ಲಾಠಿ ಬೀಸುವ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಲಾಠಿ ಏಟಿನಿಂದ ಅನಾಹುತ ಆಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಪೊಲೀಸ್ ಸಿಬ್ಬಂದಿ ಲಾಠಿ ಬೀಸದೆ ವಾಹನಗನ್ನು ಸೀಜ್ ಮಾಡುವ ಕೆಲಸ ಮಾಡಬೇಕು ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕರೋನಾ ಪ್ರಕರಣಗಳು ಪತ್ತೆಯಾಗಿಲ್ಲ. ವಿದೇಶದಿಂದ ಬಂದಿರುವವರು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ ಎಂದಿದ್ದಾರೆ.