ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಹಾಗೂ ಸಚಿವ ಪ್ರಿಯಾಂಕ ಖರ್ಗೆ ನಡೆಯಿಂದ ಮುನಿಸಿಕೊಂಡಿದ್ದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ ಮಾತೃ ಪಕ್ಷಕ್ಕೆ ಕೈ ಕೊಟ್ಟು ರಾಜೀನಾಮೆ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಸ್ಪೀಕರ್ ರಮೇಶ್ಕುಮಾರ್ ಅವರನ್ನು ಖುದ್ದು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ತಮ್ಮ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಾಗಿ ಜಾಧವ್ ಅವರು ತಮ್ಮ ಆಪ್ತವಲಯಗಳಿಗೆ ತನ್ನ ನಿರ್ಧಾರ ತಿಳಿಸಿರುವುದಾಗಿ ವದಂತಿ ಹರಿದಾಡುತ್ತಿದೆ.
ಸಚಿವ ಪ್ರಿಯಾಂಕ ಖರ್ಗೆ ಅವರು ನನ್ನ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಅವರ ಶಾಸಕ ಉಮೇಶ ಜಾಧವ ಹಾಗೂ ಅವರ ಸಹೋದರ ದೂರಿದ್ದರು. ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗದೇ ಈ ಹಿಂದೆ 15 ದಿನ ಮುಂಬೈನಲ್ಲಿ ಇದ್ದರು.