Publish Date: Mon, 15 Mar 2021 (12:53 IST)
Updated Date: Mon, 15 Mar 2021 (12:55 IST)
ಬೆಂಗಳೂರು : ಮೀಸಲಾತಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಭಿನಂದನೆ ಸಲ್ಲಿಸಿದ್ದಾರೆ.
ಸದನದಲ್ಲಿ ಸಿಎಂ ಬಿಎಸ್ ವೈ ಮೀಸಲಾತಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇವೆ. ಧರಣಿ ಮುಂದೂಡುವ ಬಗ್ಗೆ ಶ್ರೀಗಳ ಜತೆ ಚರ್ಚೆ ಮಾಡುತ್ತೇನೆ. 6 ತಿಂಗಳು ಧರಣಿ ಮುಂದೂಡುವ ಬಗ್ಗೆ ಮನವಿ ಮಾಡುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.