ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗಾಗಿ ಬೆಂಗಳೂರಿನ ಶಾಸಕ, ಸಂಸದರ ಅಭಿಪ್ರಾಯ ಸಂಗ್ರಹಕ್ಕಾಗಿ ಇಂದು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ನಾಳೆ ಬಿಬಿಎಂಪಿ ಮೇಯರ್, ಉಪಮೇಯರ್ ಹುದ್ದೆಗಾಗಿ ಚುನಾವಣೆ ನಡೆಯಲಿದ್ದು,ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಮೇಯರ್ ಹುದ್ದೆಗಾಗಿ ಆರು ಕಾರ್ಪೋರೇಟರ್‌ಗಳು ರೇಸ್‌ನಲ್ಲಿದ್ದು ತಮ್ಮ ತಮ್ಮ ಗಾಡ್‌ಫಾದರ್‌ಗಳ ಮೂಲಕ ಕಸರತ್ತು ಆರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರು, ಬೆಂಗಳೂರಿನ ಶಾಸಕರು ಮತ್ತು ಸಂಸದರ ಒಟ್ಟು ಅಭಿಪ್ರಾಯವನ್ನು ಆಲಿಸಿದ ನಂತರ ಮೇಯರ್ ಯಾರಾಗಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಉಪಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ದೊರೆಯಲೇಬೇಕು ಎಂದು ಪಟ್ಟು ಹಿಡಿದಿರುವುದು ಕಾಂಗ್ರೆಸ್ ಪಕ್ಷಕ್ಕೆ ಇಕ್ಕಟ್ಟಿನ ಸ್ಥಿತಿ ಎದುರಾಗಿದೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.