ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಬಗೆಹರಿಸಲು ಶಿಕ್ಷಕರು ಹಗಲಿರಲು ಹೋರಾಟ ನಡೆಸುತ್ತಿದ್ದರೂ ಸರಕಾರದ ಮೌನ ಧೋರಣೆ ತೀವ್ರ ಖಂಡನೀಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶಿಕ್ಷಕರ ಮೇಲೆ ಸರಕಾರ ತೋರುತ್ತಿರುವ ಧೋರಣೆ ಖಂಡಿಸಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಒಂದು ವೇಳೆ, ಪ್ರತಿಭಟನೆ ಕೈ ಮೀರಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸರಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿರುವ ಸರಕಾರ, ಸಾಮಾನ್ಯ ಜನತೆಯ ಹೋರಾಟಕ್ಕೆ ಯಾವ ರೀತಿ ಸ್ಪಂದಿಸುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಗುಡುಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರಕಾರ ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಫಲವಾಗಿದೆ. ಸರಕಾರ ಯಾವ ಪ್ರತಿಭಟನೆಗೂ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.