Publish Date: Mon, 08 Oct 2018 (18:48 IST)
Updated Date: Mon, 08 Oct 2018 (18:50 IST)
ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸಿಎಂ ಹಾಗೂ ಸಚಿವ ಡಿಕೆಶಿ ಅವರ ಧೋರಣೆಯಿಂದ ರಾಜೀನಾಮೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಎಂಎಲ್ ಸಿ ರಘು ಆಚಾರ್ ತಿಳಿಸಿದ್ದಾರೆ.
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡದ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರ ಉಳಿಸಿಕೊಳ್ಳುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ ಎಂದೂ ರಘು ಆಚಾರ್ ಆರೋಪ ಮಾಡಿದ್ದಾರೆ.