Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೊಬೈಲ್ ಫೋನ್ಗಳನ್ನು ಸಾರ್ವಜನಿಕರಿಂದ ಎಗರಿಸುತ್ತಿದ್ದ ಆರೋಪಿಯೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ಬೆಲೆಬಾಳುವ ನಾಲ್ಕು ಮೊಬೈಲ್ ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾ.8ರಂದು ರಾತ್ರಿ 8.45ರ ಸುಮಾರಿನಲ್ಲಿ ಕೆಂಗೇರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಮೊಬೈಲ್ ನೋಡುತ್ತ ನಿಂತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅವರ ಕೈಯಿಂದ ಒನ್ ಪ್ಲಸ್ ಮೊಬೈಲ್ಅನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇನ್ಸ್ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಯೊಬ್ಬನನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆಗೊಳ ಪಡಿಸಿದ್ದಾರೆ.
ಆರೋಪಿ ನೀಡಿದ ಮಾಹಿತಿ ಮೇರೆಗೆ 4 ಲಕ್ಷ ರೂ. ಬೆಲೆಬಾಳುವ ಕೆಂಗೇರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮೊಬೈಲ್ ಫೋನ್ಗಳು ಮತ್ತು ಜ್ಞಾನಭಾರತಿ ಹಾಗೂ ಗಿರಿನಗರ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಕೆಂಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.