ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ಸರ್ಕಾರ ನಿಷೇಧ ಹೇರುತ್ತದೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ಮಾಡಲಾಗುವುದು ಎಂಬ ಗಾಳಿ ಸುದ್ದಿ ಎಲೆಡೆ ಹಬ್ಬಿದೆ, ಆದರೆ ಈಗ ಶಿಕ್ಷಣ ವ್ಯವಸ್ಥೆಯ ತರಗತಿಗಳು ಆನ್ ಲೈನ್ ನಲ್ಲಿ ನಡೆಯುತ್ತಿದ್ದು, ಮೊಬೈಲ್, ಕಂಪ್ಯೂಟರ್, ಲ್ಯಾಬ್ ಟಾಪ್ ಸೇರಿ ವಿವಿಧ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ.
ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪೂರೈಸಲು ಈ ತಾಂತ್ರಿಕ ಸಾಧನಗಳ ಬಳಕೆ ಅಗತ್ಯವಿದ್ದು, ಅವುಗಳನ್ನು ನಿಷೇಧಿಸುವ ಮಾತಿಲ್ಲ ಎಂದಿದ್ದಾರೆ.