Publish Date: Mon, 01 Jun 2020 (18:58 IST)
Updated Date: Mon, 01 Jun 2020 (19:00 IST)
ಕೇಂದ್ರ ಸರಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿರುವ ಆಡಳಿತ ನೀಡುತ್ತಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಆಡಳಿತವು, ಸ್ವಾತಂತ್ರ ನಂತರ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯ ಬಗ್ಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಉಜ್ವಲ ಯೋಜನೆ, ಜನೌಷಧಿ ಕೇಂದ್ರ ಸ್ಥಾಪನೆ, ಆಯುಷ್ಮಾನ್ ಭಾರತ್, ಜಮ್ಮು ಕಾಶ್ಮೀರದಲ್ಲಿ 370 ಆರ್ಟಿಕಲ್ ವಜಾ, ತ್ರಿವಳಿ ತಲಾಕ್ ತೆಗೆದು ಹಾಕಿದ್ದು, ಸಿಎಎ ಜಾರಿ, ಕೋವಿಡ್ ಸಂಕಷ್ಟದಲ್ಲಿ ದೇಶದ ಆರ್ಥಿಕ ಪುನಶ್ಚೇತನಕ್ಕೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಕೇಂದ್ರ ಸರ್ಕಾರದ ಸಾಧನೆಯಾಗಿವೆ ಎಂದಿದ್ದಾರೆ.
ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತದಿಂದ ವಿಶ್ವವೇ ಭಾರತದ ಅಭಿವೃದ್ಧಿ ನೋಡುವಂತಾಗಿದೆ ಎಂದರು.