ಪ್ರಧಾನಿ ನರೇಂದ್ರ ಮೋದಿ ವಾಮ ಮಾರ್ಗದ ಮೂಲಕ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ, ಬಿಜೆಪಿಗೆ ಸೇರ್ಪಡೆಗೊಳಿಸಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದ್ದಾರೆ. ಇದಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಗುಡುಗಿದ್ದಾರೆ.
ತಮಿಳುನಾಡು ಹೊರತುಪಡಿಸಿ ದೇಶಾದ್ಯಂತ ಎಲ್ಲಾ ರಾಜ್ಯಗಳನ್ನು ಕೇಸರಿಕರಣಗೊಳಿಸಲು ಮೋದಿ ಮತ್ತು ಅಮಿತ್ ಶಾ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂದು ಬಿಜೆಪಿಯವರು ವಾಮಮಾರ್ಗ ಅನುಸರಿಸುತ್ತಿರುವುದು ಸರಿಯಲ್ಲ. ಒಂದು ಸೀಟ್‌ಗಾಗಿ ಇಷ್ಟೆಲ್ಲಾ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.
1972 ರಲ್ಲಿ ಜನಾದೇಶ ವಿರುದ್ಧ ಕಾಂಗ್ರೆಸ್ ಎಲ್ಲಾ ರಾಜ್ಯಗಳನ್ನು ವಶಪಡಿಸಿಕೊಂಡಿತ್ತು. ಇದೀಗ, ಕಾಂಗ್ರೆಸ್‌ನಂತೆ ಬಿಜೆಪಿ ಕೂಡಾ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.