ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿಗೆ ಸೇರಿದ 5 ದೇಶಗಳ 637 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ಉದ್ಯಮಿ ನೀರವ್ ಮೋದಿ ಅವರಿಗೆ ಸೇರಿದ 637 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಂಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,400 ಕೋಟಿ ರೂ. ವಂಚಿಸಿ, ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರ ಭಾರತ ಸೇರಿದಂತೆ 5 ದೇಶಗಳಲ್ಲಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಇದರಿಂದಾಗಿ ವಂಚನೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮೋದಿಗೆ ಮತ್ತಷ್ಟು ಹಿನ್ನಡೆ ಆದಂತಾಗಿದೆ.