Publish Date: Tue, 28 Feb 2023 (18:27 IST)
Updated Date: Tue, 28 Feb 2023 (20:28 IST)
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಕೇಂದ್ರ ನಾಯಕರು ಕೊಟ್ಟ ನೋವಿನ ಬಗ್ಗೆ ಪ್ರಧಾನಿ ಮೋದಿ ಅವರು ಮಾತಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಅವರು ಬಿಎಸ್ವೈರನ್ನ ಹಾಡಿ ಹೊಗಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಸ್ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.
ಮೋದಿ ಈ ದೇಶದ ಪ್ರಧಾನಿ, ನಾವು ಅವರನ್ನ ಗೌರವಿಸುತ್ತೇವೆ. ಆದರೆ ಬಿಜೆಪಿಯಲ್ಲಿ ಬಿಎಸ್ವೈ ಅವರಿಗೆ ಕೊಟ್ಟ ನೋವು, ವಿಧಾನಸೌಧದಿಂದ ರಾಜ್ಯಪಾಲರ ಮನೆವರೆಗೂ ಕಣ್ಣೀರು ಹಾಕಿಕೊಂಡೇ ಹೋಗಿ ರಾಜೀನಾಮೆ ನೀಡಿದ್ರಲ್ಲ, ಆ ಬಗ್ಗೆ ಮೋದಿ ಅವರು ಮಾತನಾಡಬೇಕು.