Publish Date: Sat, 02 Mar 2019 (19:48 IST)
Updated Date: Sat, 02 Mar 2019 (19:49 IST)
ಲೋಕಸಭೆ ಚುನಾವಣೆಗೆ ಕಣ ರಂಗೇರಿರುವಂತೆ ದಿಗ್ಗಜರ ಕ್ಷೇತ್ರಗಳಲ್ಲಿ ಹೈಟೆನ್ಶನ್ ವಾರ್ ಶುರುವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರ ಅಮೇಥಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯಕ್, ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹಾಗೂ ಕೇಂದ್ರ ಜವಳಿ ಸಚಿವ ಸ್ಮೃತಿ ಇರಾನಿ ಪಿಎಂ ಭಾಗವಹಿಸುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ 3ರಂದು ಪ್ರಧಾನಿ ಮೋದಿ ಅಮೇಥಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಈಗ ಮತ್ತೊಮ್ಮೆ ರಾಹುಲ್ ವಿರುದ್ಧ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಹೀಗಾಗಿ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಅಮೇಥಿ ಪ್ರತಿಷ್ಠೆಯ ಕಣವಾಗಿದೆ.