3 ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿಗೆ ಭೇಟಿ ನೀಡಿದ್ದು, ಅಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಿನ್ನೆ ಸಂಜೆ ತಿರುಪತಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 8 ಗಂಟೆಗೆ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 8 ರಿಂದ 8.45 ರವರೆಗೆ ದೇವಾಲಯದೊಳಗೆ ಇದ್ದ ಮೋದಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತಿರುಮಲಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ. ತಿರುಪತಿ ಮತ್ತು ತಿರುಮಲದಲ್ಲಿ ಭದ್ರತೆಯನ್ನು ತೀವ್ರ ಬಿಗಿಗೊಳಸಲಾಗಿದೆ.
ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನದ ಬಳಿಕ ಪ್ರಧಾನಿ ತೆಲಂಗಾಣ ಸಾರ್ವತ್ರಿಕಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ಸಮಾವೇಶ ಹಾಗೂ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಸಂಜೆ ಹೈದರಾಬಾದ್ ನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5.30 ರಿಂದ 7ರವರೆಗೆ ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಕಮಲ ಪಾಳಯದ ಗೆಲುವಿಗೆ ಜನರಿಗೆ ಮನವಿ ಮಾಡಲಿದ್ದಾರೆ.