Publish Date: Tue, 28 Feb 2023 (10:50 IST)
Updated Date: Tue, 28 Feb 2023 (09:52 IST)
ಚಿಕ್ಕಬಳ್ಳಾಪುರ : ಮಾ.17ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ 1.5 ಕೋಟಿ ಕಾರ್ಡುಗಳ ವಿತರಣೆ ಮಾಡುವ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು,
ಇದರ ಜೊತೆಗೆ ವೈದ್ಯಕೀಯ ಕಾಲೇಜು ಉದ್ಘಾಟನೆ ಮತ್ತು 22 ಸಾವಿರ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ. ಸುಧಾಕರ್ ಹೇಳಿದರು.
ಮಂಚೇನಹಳ್ಳಿ ತಾಲೂಕಿನ ಹಳೇಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ನೂತನ ತಾಲೂಕು ಮಂಚೇನಹಳ್ಳಿ ಒಂದರಲ್ಲಿಯೇ 5 ಸಾವಿರ ನಿವೇಶನ ನೀಡುತ್ತಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 22 ಸಾವಿರ ನಿವೇಶನಗಳನ್ನು ಬಡವರಿಗೆ ವಿತರಿಸಲು ಮಾ.17 ರಂದು ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸಲಿದ್ದಾರೆ ಎಂದರು.