48ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆಯಾಗಲಿದೆ. ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುಗಿರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಎಚ್ಚರಿಕೆ ಸಹ ನೀಡಲಾಗಿದೆ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಪ್ರತಿ ಘಂಟೆಗೆ 45 - 55 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ನಗರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಪರದಾಡಯವಂತಾಗಿ ವಾಹನ ಸವಾರರು ಟ್ರಾಫಿಕ್ ಸಮಸ್ಯೆಗೆ ಸಿಲುಕಿ ಒದ್ದಾಡ್ತಿದ್ದಾರೆ, ನಿತ್ಯ ಸುರಿಯೋ ಮಳೆಗೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ.ರಾಜಧಾನಿ ಕಂಡು ಕೇಳರಿಯದ ಮಳೆಗೆ ತತ್ತರಿಸಿ ಹೋಗಿದೆ. ಬೆಂಗಳೂರಿನ ಹಲವೆಡೆ ಮಳೆರಾಯ ಭಾರೀ ಅವಾಂತರ ಸೃಷ್ಟಿಸಿದ್ದು, ಜನರು ಮಳೆಯಿಂದ ಕಂಗಾಲಾಗಿದ್ದಾರೆ. ಇದೀಗ ಹವಾಮಾನ ಇಲಾಖೆ ಮತ್ತಷ್ಟು ಮಳೆಯ ಮುನ್ಸೂಚನೆ ನೀಡಿದೆ.