ಚಿತ್ರದುರ್ಗ : ಹೊಳಲ್ಕೆರೆ ಪಟ್ಟಣ ಬಳಿಯ ಕಣಿವೆ ಪ್ರದೇಶದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿನ್ನೆ (ನ.12) ಬೆಳಿಗ್ಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ಉಪ್ಪಿಟ್ಟು ಉಪಹಾರ ಸೇವನೆ ಬಳಿಕ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ ಅನ್ನ, ಸಾರು ಸೇವನೆ ನಂತರ ಸಂಜೆ ವೇಳೆ ಐದಾರು ವಿದ್ಯಾರ್ಥಿಗಳಿಗೆ ವಾಂತಿ ಶುರುವಾಗಿದೆ. ರಾತ್ರಿ ಊಟದ ನಂತರ ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇಂದು ಬೆಳಿಗ್ಗೆಯೂ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.