Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ
ಚಾಮರಾಜನಗರ , ಶನಿವಾರ, 11 ಆಗಸ್ಟ್ 2018 (14:02 IST)
ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ. ಕಾವೇರಿ ಕೊಳ್ಳದ ರೈತರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಚಾಮರಾಜನಗರ ಜಿಲ್ಲಾಡಳಿತ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು, ಅವರ ಆಸ್ತಿಪಾಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ  ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಜಲಾಶಯದಲ್ಲಿ ಒಳಹರಿವು ಹೆಚ್ಚಾಗುತ್ತಿರುವುದು ಜಲಾಶಯ ತೀರದ ಗ್ರಾಮಗಳ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ನೆರೆಮನೆಯವನಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ಮಗುವಿಗೆ ಜನ್ಮ ನೀಡಿದ ಬಾಲಕಿ