Publish Date: Wednesday, 01 November 2023 (09:28 IST)
Updated Date: Wednesday, 01 November 2023 (06:42 IST)
ಮಂಗಳೂರು: ಅತ್ಯಾಚಾರ ವಿರೋಧಿಸಿದ್ದಕ್ಕೆ ಮಗನೇ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
62 ವರ್ಷದ ಮಹಿಳೆ ಮೃತಪಟ್ಟ ದುರ್ದೈವಿ. ಅತ್ಯಾಚಾರ ವಿರೋಧಿಸಿದ್ದಕ್ಕೆ ಆರೋಪಿ ಪುತ್ರ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾನೆ.
ಮೂರು ದಿನಗಳ ಬಳಿಕ ನೊಣ ಮುತ್ತಿಕೊಂಡು, ದುರ್ವಾಸನೆ ಬೀರುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.