4 ವರ್ಷದ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಾಯಿ!

Webdunia
ಮಂಗಳವಾರ, 11 ಜನವರಿ 2022 (08:39 IST)
ಮೈಸೂರು : ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
 
ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.

ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.
ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments