Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಂಗಳೂರು : ಮಗನೇ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ.
ಜಯರಾಮ ರೈ (35) ಬಂಧಿತ ಆರೋಪಿ. ಮಗನ ಕೃತ್ಯದಿಂದ ಶಾಕ್ಗೆ ಒಳಗಾದ 58 ವರ್ಷದ ತಾಯಿ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅಮಾನುಷವಾಗಿ ಪ್ರಾಣಿಯಂತೆ ಎರಗಿ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಜಯರಾಮ ರೈ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್) ಮತ್ತು 506 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಸುಕಿನ ಜಾವ 3 ಗಂಟೆಗೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಕಿರುಚಿ ಪ್ರತಿರೋಧ ತೋರಿದ್ದಾರೆ. ಆದರೆ ಆರೋಪಿ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ.
.