ಇಂದಿನಿಂದ ಜುಲೈ 26ರವರೆಗೆ ಒಟ್ಟು 40 ದಿನಗಳ ಕಾಲ ನಡೆಯುವ ಅಧಿವೇಶನ ನಡೆಯಲಿದ್ದು, ಈಗಾಗಲೇ ಪ್ರಧಾನಿ ಮೋದಿ ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಪ್ರತಿಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಸಂಸದ ಪ್ರಜ್ವಲ್ ರೇವಣ್ಣ ಮೊದಲ ದಿನವೇ ಗೈರು ಹಾಜರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ಅನಾರೋಗ್ಯದ ಕಾರಣದಿಂದ ಅಧಿವೇಶನಕ್ಕೆ ಬರಲು ಆಗಿಲ್ಲ. ಜೂನ್ 19ರಂದು ಕಲಾಪಕ್ಕೆ ಹಾಜರಾಗುತ್ತೇನೆ. ನಿಮ್ಮ ಸಲಹೆ, ಮಾರ್ಗದರ್ಶನ ನನಗೆ ಅಗತ್ಯ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎನ್ನಲಾಗಿದೆ.