Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜ್ಞಾನಯೋಗಿ, ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದು, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಕೇವಲ ಸಾಮಾನ್ಯ ಭಕ್ತರಷ್ಟೇ ಅಲ್ಲದೇ ಗಣ್ಯಾತಿಗಣ್ಯರು ಸಹ ಶ್ರೀಗಳ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನ ಪಡೆದ ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಶ್ರೀಗಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದ್ದು, ಶ್ರೀಗಳ ಕುರಿತಾದ ಅಧ್ಯಯನ ಕೇಂದ್ರ ಸ್ಥಾಪಿಸಿ, ವಿಶ್ವವಿದ್ಯಾಲಯಗಳ ಮೂಲಕ ವಿದ್ಯಾರ್ಥಿಗಳಿಗೆ ಶ್ರೀಗಳ ಜ್ಞಾನ ದಾರಿ ದೀಪವಾಗಬೇಕು. ಈ ಕುರಿತು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಶ್ರೀಗಳ ಕುರಿತು ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವಂತೆ ಮುತಾಲಿಕ್ ಸರ್ಕಾರಕ್ಕೆ ಮನವಿ ಮಾಡಿದರು.