Publish Date: Sun, 19 Mar 2023 (09:04 IST)
Updated Date: Sun, 19 Mar 2023 (09:56 IST)
ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಪ್ರಚಾರ ಬಿರುಸುಗೊಳಿಸಿದ್ದಾರೆ. ಇದೇ ಮಾರ್ಚ್ 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಮೋದಿ ಎಂಟ್ರಿ ಕೊಡ್ತಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ಮಾಡುವ ಮೂಲಕ ಮೋಡಿ ಮಾಡಲಿದ್ದಾರೆ.
28 ವಿಧಾನಸಭಾ ಕ್ಷೇತ್ರಗಳಿರುವ ಬೆಂಗಳೂರಿನ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, 20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಮೋದಿಯವರು ಬೆಂಗಳೂರಿಗೆ ವಿಶೇಷ ಆದ್ಯತೆ ಕೊಟ್ಟಿದ್ದಾರೆ. 25 ರಂದು ಬೆಂಗಳೂರಿಗೆ ಬರುತ್ತಿರುವ ಅವರು, ಅಂದು ನೂತನ ಮೆಟ್ರೋ ಮಾರ್ಗ (ವೈಟ್ ಫೀಲ್ಡ್, ಕೆ.ಆರ್ ಪುರದವರೆಗಿನ ಮಾರ್ಗ) ಲೋಕಾರ್ಪಣೆಗೊಳಿಸಲಿದ್ದಾರೆ. ಅದೇ ಸಂದರ್ಭದಲ್ಲಿ ಮೆಗಾ ರೋಡ್ ಶೋ ನಡೆಸಿ ರಾಜಧಾನಿಯ ಮತದಾರರನ್ನ ಸೆಳೆಯುವ ಕಸರತ್ತು ನಡೆಸಲಿದ್ದಾರೆ.
ಈ ಬಾರಿಯೂ ಮೋದಿಯವರು ಅಭಿವೃದ್ಧಿಯ ಮಂತ್ರದಂಡ ಹಿಡಿದುಕೊಂಡೇ ಆಗಮಿಸುತ್ತಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಶನಿವಾರ ವೈಟ್ಫೀಲ್ಡ್ ಮೆಟ್ರೋ ಸ್ಟೇಷನ್ಗೆ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ್ದಾರೆ. ಜೊತೆಗೆ ಟ್ವೀಟ್ ಮೂಲಕ ಪ್ರಧಾನಿಯಿಂದಲೇ ಉದ್ಘಾಟನೆ ಅಂತಾ ಶಾಸಕರು ದೃಢಪಡಿಸಿದ್ದಾರೆ.