1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ವಾರಣಾಸಿಯ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆ ನ್ಯಾಯಾಲಯ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಅನ್ಸಾರಿ ದೋಷಿ ಎಂದು ತೀರ್ಪು ನೀಡಿತ್ತು. ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು. 32 ವರ್ಷಗಳಷ್ಟು ಹಳೆಯದಾದ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಣಾಸಿಯ ನ್ಯಾಯಾಲಯವು ಜೈಲಿನಲ್ಲಿರುವ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಮತ್ತು ₹ 1,00,000 ದಂಡ ವಿಧಿಸಿದೆ.