ಕೋವಿಡ್- 19 ಪರೀಕ್ಷಾ ಪ್ರಯೋಗಾಲಯ ಶೀಘ್ರವಾಗಿ ಕಾರ್ಯಾರಂಭವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಶೀಘ್ರವಾಗಿ ಕಾರ್ಯಾರಂಭವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಸಿರು ವಲಯದಲ್ಲಿದ್ದ ರಾಯಚೂರು ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದ ಸ್ಥಳೀಯ ವಲಸಿಗರಿಂದ 16 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇನ್ನು ಮುಂದೆ ರೈಲು ಹಾಗೂ ಬಸ್‌ಗಳ ಸಂಚಾರದಿಂದಾಗಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ ಎಂದಿದ್ದಾರೆ.