ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಜಿಲ್ಲೆಯ 24 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.
ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಇದರಿಂದ ಸೋಂಕಿತರ ಸಂಖ್ಯೆ ಕಲಬುರಗಿ ಜಿಲ್ಲೆಯಲ್ಲಿ 304 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 128 ಜನ ಗುಣಮುಖರಾಗಿ ಈಗಾಗಲೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 169 ಮಾತ್ರ ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್ ಬಿ. ವಿವರಿಸಿದ್ದಾರೆ.