ರಾಜಧಾನಿ ಬೆಂಗಳೂರಿನ ಹೆಗ್ಗೇನಹಳ್ಳಿ ಕ್ರಾಸ್ ನಲ್ಲಿ ವೈಕ್ತಿಯನ್ನು ಹತ್ಯೆಗೈದ ಆರೋಪದ ಮೇಲೆ ಮಾಜಿ ಕಾರ್ಪೋರೇಟರ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ.
ಹೆಗ್ಗನಹಳ್ಳಿಯ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡ ಹಾಗೂ ಅವರ ಪತ್ನಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ವೈಷಮ್ಯದಿಂದ ಇದೇ ತಿಂಗಳು 8 ರಂದು ಬಿಜೆಪಿಯ ಸಕ್ರಿಯ ಕಾರ್ಯಕರ್ತ ಚಿಕ್ಕತಿಮ್ಮೇಗೌಡರನ್ನು ಐವರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು.
ಮಾಜಿ ಕಾರ್ಪೋರೇಟರ್ ಹಾಗೂ ಆತನ ಪತ್ನಿ, ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡರನ್ನು ಕೊಲೆ ಮಾಡಲು ದುಷ್ಕರ್ಮಿಗಳಿಗೆ 30 ಲಕ್ಷ ರೂಪಾಯಿಗಳ ಸುಪಾರಿ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಈ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ